ದಾವಣಗೆರೆ ಶ್ರೀ ಗುರುದೇವ ವಿದ್ಯಾಸಂಸ್ಥೆಯ ವಿದ್ಯಾಸಾಗರ ಶಾಲೆ ವತಿಯಿಂದ ಇಂದು ಸಂಜೆ 6 ಗಂಟೆಗೆ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ `ಮಕ್ಕಳ ಹಬ್ಬ-2025′ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾಹಿತಿ, ಪಾಲಿಕೆ ಮಾಜಿ ಸದಸ್ಯ ಬಾ.ಮ. ಬಸವರಾಜಯ್ಯ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್. ಬಡದಾಳ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಸಮಿತಿ ಅಧ್ಯಕ್ಷ ಆರ್. ಭರತ್ ಸಿಂಗ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಾಲ್ಯ ಜೀವನ ಆಧರಿತ `ಬೆಳಕು ಹಂಚಿದ ಬಾಲಕ’ ಮಕ್ಕಳ ನಾಟಕ ಪ್ರದರ್ಶನಗೊಳ್ಳಲಿದೆ.