ನಾಳೆ ಮಾಳಗೊಂಡನಹಳ್ಳಿಯಲ್ಲಿ ದೇವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ

ದಾವಣಗೆರೆ, ಜ. 17- ತಾಲ್ಲೂಕಿನ ಮಾಳಗೊಂಡನಹಳ್ಳಿಯ ಶ್ರೀ ವೆಂಕಟೇಶ್ವರ ಸ್ವಾಮಿ, ಶ್ರೀ ಕೋಟೆ ಆಂಜನೇಯ ಸ್ವಾಮಿ ಹಾಗೂ ಶ್ರೀ ಬೀರಲಿಂಗೇಶ್ವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ  ಕಾರ್ಯಕ್ರಮ ನಾಡಿದ್ದು ದಿನಾಂಕ 19 ರ ಭಾನುವಾರ ಬೆಳಿಗ್ಗೆ 9 ಕ್ಕೆ ನಡೆಯಲಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆ ನಿರ್ದೇಶಕ ಸಂಪನ್ನ ವಿ. ಮುತಾಲಿಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಡಿಡಿಸಿಸಿ ಬ್ಯಾಂಕ್ ನಿರ್ದೇಶಕ ಮುದೇಗೌಡ್ರು ಗಿರೀಶ್, ವೈ. ರಂಗಪ್ಪ, ಜಿ.ಪಂ. ಮಾಜಿ ಸದಸ್ಯ ಕೆ.ಜಿ.ಬಸವನಗೌಡ್ರು, ಮೇಯರ್ ಕೆ. ಚಮನ್‌ಸಾಬ್, ಕೋ ಕೋ ಫಾರ್ಮ್‌ ಮಾಲೀಕ ಆರ್.ಜಿ.ಶ್ರೀನಿವಾಸಮೂರ್ತಿ, ಬಾಪೂಜಿ ವಿದ್ಯಾಸಂಸ್ಥೆ ನಿರ್ದೇಶಕ ಸಂಪನ್ನ ವಿ. ಮುತಾಲಿಕ್, ಜಿ.ಪಂ.ಮಾಜಿ ಸದಸ್ಯೆ ರೇಣುಕಮ್ಮ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. 

ಮಾಳಗೊಂಡನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ  ಬಿ.ಕೆ.ಪರಶುರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಮಾಧ್ವ ಪ್ರಸಾದ್, ಎ.ಬಿ.ಪ್ರಭಾಕರ್, ಬಿ.ಕೆ. ಪರಶುರಾಮ್, ಚಂದನ್ ಕುಮಾರ್ ಉಪಸ್ಥಿತರಿದ್ದರು.

error: Content is protected !!