ಸೇವಾಲಾಲ್ ಜಯಂತಿ ನಗರದಲ್ಲಿ ಇಂದು ಸಭೆ

ನ್ಯಾಮತಿ ತಾಲ್ಲೂಕು  ಸೂರಗೊಂಡನಕೊಪ್ಪ ದಲ್ಲಿ ಫೆ.13 ರಿಂದ 15 ರವರೆಗೆ ನಡೆಯುವ ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಮಹಾರಾಜರ 286ನೇ ಜನ್ಮ ದಿನಾಚರಣೆ ಪ್ರಯುಕ್ತ ಜಾತ್ರಾ ಮಹೋತ್ಸವ ಆಚರಣೆಯ 1ನೇ ಪೂರ್ವಭಾವಿ ಸಭೆಯನ್ನು ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು  ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ತಿಳಿಸಿದ್ದಾರೆ.

error: Content is protected !!