26ರಂದು 76ನೇ ಗಣರಾಜ್ಯೋತ್ಸವ

ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ

ದಾವಣಗೆರೆ, ಜ. 22 –   ಜಿಲ್ಲಾಡಳಿತದ ವತಿಯಿಂದ ಜ.26 ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಜ.26ರ ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರುಣ್, ಕೆ.ಎಸ್. ನವೀನ್, ಕೆ. ಅಬ್ದುಲ್ ಜಬ್ಬಾರ್, ಡಾ. ಧನಂಜಯ್ ಸರ್ಜಿ, ಡಿ.ಟಿ. ಶ್ರೀನಿವಾಸ್, ಮೇಯರ್ ಚಮನ್ ಸಾಬ್.ಕೆ, ದೂಡಾ ಅಧ್ಯಕ್ಷರಾದ ದಿನೇಶ್. ಕೆ. ಶೆಟ್ಟಿ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಂದು ಸಂಜೆ 6 ಗಂಟೆಗೆ  ಕುವೆಂಪು ಕನ್ನಡ ಭವನದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

error: Content is protected !!