ಕುಡಿಯುವ ನೀರು ಕಾಮಗಾರಿಗಳಲ್ಲಿ ಅವ್ಯವಹಾರ: ಕ್ರಮಕ್ಕೆ ಆಗ್ರಹ

ದಾವಣಗೆರೆ, ಜ. 22- 2023-24ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಸುಮಾರು 87.45 ಲಕ್ಷ ರೂ. ಅವ್ಯವಹಾರ ನಡೆದಿರುವುದಾಗಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಓಬಳೇಶ್ ಆರೋಪಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯ್ತಿ ಸಿಇಒ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ದಾವಣಗೆರೆ ಇವರಿಗೆ 71 ಕಾಮಗಾರಿಗಳಿಗೆ ಕ್ರಿಯಾಯೋಜನೆಗೆ 87.45 ಲಕ್ಷ ರೂ. ಕಾರ್ಯಾದೇಶ ನೀಡಿದ್ದಾರೆ. ಈಅನುದಾನ ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಹಿಂದಿನ ವರ್ಷಗಳ ಹಳೆಯ ಕಾಮಗಾರಿಗಳ ಕಡತಗಳಳನ್ನು ಬಳಸಿಕೊಂಡು ಅನುದಾನ ಪಡೆಯಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಸಿಇಒ ಅವರಿಗೆ ಮನವಿ ಮಾಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. 

ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ನಾಲ್ವರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿಯಲ್ಲಿ ಯಾವುದೇ ಸಿಸಿ ಟಿವಿಗಳು ಕಾರ್ಯ ನಿರ್ವಹಿಸುತ್ತಿಲ್ಲ. ಬಯೋಮೆಟ್ರಿಕ್ ಯಂತ್ರಗಳು ಹೆಸರಿಗೆ ಮಾತ್ರ ಇವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿ ಹೋರಾಟ ನಡೆಸಲಾಗುವುದು ಎಂದರು.

error: Content is protected !!