ದಾವಣಗೆರೆ, ಜ. 23- ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ (ಹೆಚ್‌ಕೆಆರ್ ಬಣ)ದ ವತಿಯಿಂದ ನಾಳೆ ದಿನಾಂಕ 24 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಸಂಘದ ಮುಖಂಡರಾದ ವಿಶಾಲಾಕ್ಷಿ ಮೃತ್ಯುಂಜಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರ ಜಾರಿಗೊಳಿಸುವ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 1975 ರಲ್ಲಿ ರೂಪಿಸಿರುವ ಅಭಿವೃದ್ಧಿ ಯೋಜನೆ (ಸಿಡಿಎಸ್) ಯು 50 ವರ್ಷಗಳಾಗಿ ಸುವರ್ಣ ಸಂಭ್ರಮದತ್ತ ಹೆಜ್ಜೆ ಹಾಕುತ್ತಿದೆ. ಆದರೆ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸದೇ ನಿರ್ಲಕ್ಷ್ಯೆ ಧೋರಣೆ ತೋರುತ್ತಿದೆ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಜೆ.ಎಂ.ಉಮಾ, ಎಂ. ಸರ್ವಮ್ಮ, ಸಿ.ಬಿ. ಕಾಳಮ್ಮ, ಚೌಡಮ್ಮ, ಸಾವಿತ್ರಮ್ಮ, ಹೊನ್ನಮ್ಮ ಉಪಸ್ಥಿತರಿದ್ದರು.