ಇಂದು ಎಂಇಎಸ್ ಶಿಕ್ಷಣ ಸಂಸ್ಥೆಯ `ಪ್ರತಿಭೋತ್ಸವ’

ದಾವಣಗೆರೆ ಆಂಜನೇಯ ಬಡಾವಣೆಯಲ್ಲಿರುವ ಎಂ.ಇ.ಎಸ್. ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಇಂದು ಸಂಜೆ 4 ಗಂಟೆಗೆ ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ `ಪ್ರತಿಭೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಸ್ಥೆ ಅಧ್ಯಕ್ಷ ಕೆ.ಪಿ.ಮಲ್ಲೇಶ್ ಅಧ್ಯಕ್ಷತೆ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ, ಪ್ಯಾರೋ ಟ್ರೋಫರ್ ಆರ್ಮಿ ಪೋಸ್ಟಿಂಗ್ ಆನ್ ಸಿಯಾಚಿನ್ ಗ್ಲೇಜಿಯರ್ ಜಿ. ಶಿವ, ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ವಿ.ಮಂಜುಳಾ ಮಲ್ಲೇಶ್, ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಪ್ರದೀಪ್, ಸಂಯೋಜನಾಧಿಕಾರಿ ಸೌಮ್ಯ ಹೆಚ್.ಟಿ. ಪ್ರದೀಪ್ ಮತ್ತಿತರರು ಭಾಗವಹಿಸಲಿದ್ದಾರೆ. 

error: Content is protected !!