ಹರಿಹರ, ಜ.26- ರಾಜನಹಳ್ಳಿ ಯಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯುವ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋ ತ್ಸವದ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಡಿದ್ದು ದಿನಾಂಕ 28 ರಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿ ಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ
January 28, 2025