ಮಲೇಬೆನ್ನೂರು, ಜ. 27- ಬೆಳಿಗ್ಗೆ ಮನೆ ಅಂಗಳದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ, ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಕೊಕ್ಕನೂರಿನಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಈ ಘಟನೆಯಿಂದಾಗಿ ಬೆಳಿಗ್ಗೆ ವಾಕಿಂಗ್ ಮಾಡುವ ಮಹಿಳೆಯರು ಭಯಭೀತರಾಗಿದ್ದಾರೆ. ಗ್ರಾಮದ ವೆಂಕಟಗೌಡ ಅವರ ಪತ್ನಿ ಶ್ರೀಮತಿ ಮಲ್ಲಮ್ಮ ಅವರ ಕೊರಳಿನಲ್ಲಿದ್ದ 37 ಗ್ರಾಂ ತೂಕದ ಮಾಂಗಲ್ಯ ಸರವನ್ನು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಅಪರಿಚಿತ ವ್ಯಕ್ತಿ ಕಿತ್ತುಕೊಂಡು ಪರಾರಿಯಾಗಿರುವ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಪ್ರಭು ಕೆಳಗಿನಮನಿ ಭೇಟಿ ನೀಡಿ ಪರಿಶೀಲಿಸಿ, ಕಳ್ಳನ ಪತ್ತೆಗಾಗಿ ಬಲೆ ಬೀಸಿದ್ದಾರೆ.