ದಾವಣಗೆರೆ, ಜ.30- ನಗರದ ಕುವೆಂಪು ಕನ್ನಡ ಭವನದಲ್ಲಿ ಫೆ.1ರಂದು ನಡೆಯುವ 11ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಲಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಆಸಕ್ತ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ನೌಕರರಿಗೆ ಸಮ್ಮೇಳನದಂದು `ಅನ್ಯ ಕಾರ್ಯ ನಿಮಿತ್ತ್ಯ ರಜೆ ಸೌಲಭ್ಯ’ ನೀಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
January 31, 2025