ದಾವಣಗೆರೆ, ಫೆ.1- ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ದಾವಣಗೆರೆ ತಾಲ್ಲೂಕು ಆನಗೋಡು- ಶಿವಪುರ ಮಾರ್ಗ ಮಧ್ಯ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ದಾವಣಗೆರೆಯ ಖಾಸಗಿ ಶಾಲೆಯೊಂದರ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
March 22, 2025