ದಾವಣಗೆರೆ ತಾಲ್ಲೂಕಿನ ಅತ್ತಿಗೆರೆ ಗ್ರಾಮದಲ್ಲಿ ಶ್ರೀ ಕೇಸರಿ ವಿದ್ಯಾಸಂಸ್ಥೆಯ ಶ್ರೀ ಕೇಸರಿ ಪಬ್ಲಿಕ್ ಸ್ಕೂಲ್ನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು ಮಧ್ಯಾಹ್ನ 12 ಕ್ಕೆ ನಡೆಯಲಿದೆ.
ಶಾಲಾ ಕಟ್ಟಡದ ಉದ್ಘಾಟನೆಯನ್ನು ಪಾಂಡೋಮಟ್ಟಿಯ ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ ನೆರವೇರಿಸುವರು. ಶ್ರೀ ಕೇಸರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ಓ. ರವಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಎಂ. ಬಸವರಾಜನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಲತಾ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹೆಚ್.ಎಸ್. ಮುರುಗೇಂದ್ರಪ್ಪ, ಪ್ರಗತಿಪರ ರೈತ ಹೆಚ್.ಬಿ. ಮುರುಗೇಶಪ್ಪ ಅವರುಗಳು ಆಗಮಿಸಲಿದ್ದಾರೆ.