ನಾಳೆ ಕಾಂಗ್ರೆಸ್ ಸಭೆ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಮನ

ದಾವಣಗೆರೆ, ಫೆ. 3 –  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಶೀಘ್ರ ನಡೆಯಲಿದ್ದು, ಈ ಚುನಾವಣೆಗೆ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವ ಉದ್ದೇಶದಿಂದ  ದಾವಣಗೆರೆ ಜಿಲ್ಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಾಡಿದ್ದು ದಿನಾಂಕ 5ರ ಬುಧವಾರ  ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಎಸ್.ಭವನದಲ್ಲಿ ಕರೆಯಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಕರೆದಿರುವ ಈ ಸಭೆಯಲ್ಲಿ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ಅವರುಗಳು ಆಗಮಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

error: Content is protected !!