ದಾವಣಗೆರೆ, ಫೆ. 4 – ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಲು ಆತ್ಮಸ್ಥೈರ್ಯ ದಿಂದ ಹೋರಾಡಿ ಜೀವ ನೋಪಾಯದಿಂದ ಪಾರು ಮಾಡಿದಂ ತಹ ಮಹಿಳೆಯ ರನ್ನು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಪರಿಗಣಿಸಲು ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಹಿಳೆಯರ ಸರ್ವತೋ ಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿ ರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳ ನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಪಡೆದು ಭರ್ತಿ ಮಾಡಿ ನಾಳೆ ದಿನಾಂಕ 5 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ವಿವರಕ್ಕೆ ದೂ.08192-2640 56 ಸಂಪರ್ಕಿಸಲು ಉಪನಿ ರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.