ವಾಲ್ಮೀಕಿ ಜಾತ್ರೆಯಲ್ಲಿ ಉದ್ಯೋಗ ಮೇಳ

ಮಲೇಬೆನ್ನೂರು, ಫೆ. 6 – ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದು, ನಾಡಿದ್ದು ದಿನಾಂಕ 8ರ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದ `ಸಂತೋಷ್ ಲಾಡ್ ಫೌಂಡೇಶನ್’ ಹಾಗೂ ಶ್ರೀಮಠದ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗಾಸಕ್ತರು ಆನ್‌ಲೈನ್ ರಿಜಿಸ್ಟ್ರೇಷನ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಬೇಕು. ನಾಡಿದ್ದು ದಿನಾಂಕ 8 ರಂದು ಹಾಜರಾಗಬೇಕು. ಜಾತ್ರಾ ಸಮಿತಿ ಅಧ್ಯಕ್ಷ ಜಗಳೂರು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 8867699477, 8296046106, 7259824287.

error: Content is protected !!