ಭರಮಸಾಗರ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿಂದು

ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಇಂದು ಸಂಜೆ 6.30ಕ್ಕೆ ಬಿಚ್ಚುಗತ್ತಿ ಭರಮಣ್ಣ ನಾಯಕ ಮಹಾಮಂಟಪದಲ್ಲಿ `ಸಮೂಹ ಮಾಧ್ಯಮ ಮತ್ತು ಸಮಾಜ’ ಕುರಿತು ಏಳನೇ ದಿನದ  ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹರಿಹರ ತಾಲ್ಲೂಕು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ದಾವಣಗೆರೆ ಪೂರ್ವ ವಲಯ ಐಜಿಪಿ ಡಾ. ಟಿ.ಆರ್. ರವಿಕಾಂತೇಗೌಡ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಗಮಿಸಲಿದ್ದಾರೆ.

ಕೇರಳದ ಕನ್ನೂರು ಪೊಲೀಸ್ ಉಪ ಮಹಾನಿರೀಕ್ಷಕ ಯತೀಶ್ಚಂದ್ರ, ಮೀಡಿಯಾ ಮಾಸ್ಟರ್ ವಿಮರ್ಶಕ ಎಂ.ಎಸ್. ರಾಘವೇಂದ್ರ, ವಿಸ್ತಾರ ನ್ಯೂಸ್ ಎಂ.ಎಸ್. ಶರತ್ `ಸಮೂಹ ಮಾಧ್ಯಮ ಮತ್ತು ಸಮಾಜ’ ಕುರಿತು ಉಪನ್ಯಾಸ ನೀಡಲಿದ್ದಾರೆ.

 ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಕಡೂರು ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಜಗಳೂರು ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಗೌರವ ಉಪಸ್ಥಿತಿ ವಹಿಸಿಕೊಳ್ಳಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಾವಣಗೆರೆ ಡಿವೈಎಸ್ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ಮತ್ತು ತಂಡದವರಿಂದ ವಚನಗೀತೆ, ಸಿರಿಗೆರೆ ತರಳಬಾಳು ಜಗದ್ಗುರು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಜನಪದ ನೃತ್ಯ, ಸಿರಿಗೆರೆ ತರಳಬಾಳು ಕಲಾ ಸಂಘದ ಕಲಾವಿದರಿಂದ ಭರತನಾಟ್ಯ, ಕುಂದಾಪುರ ಅಂತರರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಪ್ರಕಾಶ್ ಹೆಮ್ಮಾಡಿ ಮತ್ತು ನೇತ್ರಾವತಿ ಹೆಮ್ಮಾಡಿ ಅವರಿಂದ ಜಾದು ಪ್ರದರ್ಶನ ಏರ್ಪಡಿಸಲಾಗಿದೆ.

error: Content is protected !!