ನಗರದಲ್ಲಿಂದು ಮುಕ್ತ ಚೆಸ್ ಪಂದ್ಯ

ಜಿಲ್ಲಾ ಚೆಸ್ ಅಸೋಸಿಯೇಷನ್ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಲಯನ್ಸ್ ಭವನದಲ್ಲಿ ರಾಜ್ಯಮಟ್ಟದ ಮುಕ್ತ ಚದುರಂಗ (ಚೆಸ್) ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಕೆ.ಎಸ್. ಸತೀಶ್ಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಮುಖ್ಯ ಅತಿಥಿಯಾಗಿ ಡಾ. ಕೆ.ವಿ. ಶ್ರೀಪಾದ ಆಗಮಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ, ಡಿಡಿಪಿಐ ಜಿ. ಕೊಟ್ರೇಶ್ ಮತ್ತಿತರರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್ ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಎ.ಎಂ.ಹೆಗಡೆ, ಎಸ್.ಜಿ.ಉಳುವಯ್ಯ, ಶ್ರೀಪಾದ ಹೆಗಡೆ, ಚಂದ್ರಪ್ಪ ಉಪಸ್ಥಿತರಿದ್ದರು. 

error: Content is protected !!