ದಾವಣಗೆರೆ, ಫೆ.8- ನಮನ ಅಕಾಡೆಮಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನಾಳೆ ದಿನಾಂಕ 9ರ ಭಾನುವಾರ ಸಂಜೆ 6 ಗಂಟೆಗೆ ನಗರದ ಬಾಪೂಜಿ ಸಭಾಂಗಣದಲ್ಲಿ ಪೂರ್ವ ರಂಗ ನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ನಮನ ಅಕಾಡೆಮಿ ಉಪಾಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಾಟ್ಯ ನಿನಾದ ಅಕಾಡೆಮಿ ನಿರ್ದೇಶಕ ಧರಣಿ ಟಿ. ಕಶ್ಯಪ್, ಎಸ್ಪಿ ಉಮಾ ಪ್ರಶಾಂತ್, ಅಪರ ಜಿಲ್ಲಾ ಧಿಕಾರಿ ಪಿ.ಎನ್. ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಯೂಟ್ಯೂಬರ್ ಟಿ. ಗಾಯತ್ರಿ, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ್ ಭಾಗವಹಿಸುವರು. ಅಕಾಡೆಮಿಯ ಗೌರವಾಧ್ಯಕ್ಷ ಡಾ.ಎ.ಎಂ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು.
ಅಕಾಡೆಮಿ ಕಾರ್ಯದರ್ಶಿ ಡಿ.ಕೆ. ಮಾಧವಿ ಮಾತನಾಡಿ, ಪೂರ್ವ ರಂಗನಮನವು ವಿಶೇಷ ಕಾರ್ಯಕ್ರಮವಾಗಿದ್ದು, ನಾನಾ ಶಾಸ್ತ್ರೀಯ ನೃತ್ಯ, ಶ್ರೀಕೃಷ್ಣ ವಿಲಾಸಂ ನೃತ್ಯರೂಪಕ, ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನಮನ ಅಕಾಡೆಮಿ ಅಧ್ಯಕ್ಷ ಕೆ.ಎನ್. ಗೋಪಾಲ ಕೃಷ್ಣ, ಮಂಜುಳಾ, ಟಿ. ಯುವರಾಜ್ ಇದ್ದರು.