ಹರಿಹರ, ಫೆ. 10 – ಹರಿಹರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶದ 124 ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುವ 58,335 ಅಂತ್ಯೋದಯ ಅನ್ನ ಯೋಜನೆ ಮತ್ತು ಅದ್ಯತಾ ಬಿ.ಪಿ.ಎಲ್ ಪಡಿತರ ಚೀಟಿಗಳಲ್ಲಿನ ಒಟ್ಟು ಸದಸ್ಯರ ಪೈಕಿ 7567 ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರ ಇ-ಕೆವೈಸಿ ಮಾಡಲು ಬಾಕಿ ಇರುತ್ತದೆ. ಬಾಕಿ ಇರುವ 7567 ಸದಸ್ಯರುಗಳು ಕೂಡಲೇ ಇ-ಕೆವೈಸಿಯನ್ನು ಪ್ರತಿ ದಿನ ಬೆಳಗ್ಗೆ 7 ರಿಂದ ಸಂಜೆ 8 ಗಂಟೆಯವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಅಥವಾ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪೋರ್ಟಬಿಲಿಟಿ ಮೂಲಕ ಇ-ಕೆವೈಸಿ ಯನ್ನು ಉಚಿತವಾಗಿ ಮಾಡಿಕೊಳ್ಳಬಹುದೆಂದು ಹರಿಹರ ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ.
March 14, 2025