9 ವಿಶ್ವವಿದ್ಯಾಲಯ ಮುಚ್ಚುವ ಕ್ರಮಕ್ಕೆ ಎಐಡಿಎಸ್‌ಓ ಖಂಡನೆ

ದಾವಣಗೆರೆ, ಫೆ.17- ರಾಜ್ಯ ಕಾಂಗ್ರೆಸ್‌ ಸರ್ಕಾರವು ತನ್ನ ಸಂಪುಟ ಸಭೆಯ ಉಪಸಮಿತಿ ಮೂಲಕ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಕೈಗೊಂಡ ನಿರ್ಧಾರವನ್ನು ಎಐಡಿಎಸ್‌ಓ ಉಗ್ರವಾಗಿ ಖಂಡಿಸುತ್ತದೆ.  ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸದೇ ಅಪ್ರಜಾತಾಂತ್ರಿಕವಾಗಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿತ್ತು. ನೃಪತುಂಗ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಎಂಬ ಪಟ್ಟ ಕಟ್ಟಿ ಇವುಗಳನ್ನು ಸ್ವ ಹಣಕಾಸು ಸಂಸ್ಥೆಗಳನ್ನಾಗಿ ಮಾಡಿ ಮೂರು ಪಟ್ಟು ಶುಲ್ಕ ಹೆಚ್ಚಿಸಲಾಗಿತ್ತು. ಈ ಬಗ್ಗೆ ಎ.ಐ.ಡಿ.ಎಸ್.ಓ ಅನೇಕ ಬಾರಿ ಪ್ರತಿರೋಧ ವ್ಯಕ್ತಪಡಿಸಿತ್ತು.

ಮುಚ್ಚಲ್ಪಡುತ್ತಿರುವ 9 ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಬೋಧಕರು ಹಾಗೂ ಇತರೆ ಸಿಬ್ಬಂದಿ ಹೊಣೆ ಯಾರದ್ದು ? ಎಂದು ವಿದ್ಯಾರ್ಥಿ ಸಂಘಟನೆ ಸರ್ಕಾರಕ್ಕೆ ಪ್ರಶ್ನಿಸಿದೆ. ಶಿಕ್ಷಣ ಕ್ಷೇತ್ರದ ಯಾವುದೇ ನಿರ್ಧಾರವನ್ನು ಏಕಪಕ್ಷೀಯವಾಗಿ ಕೈಗೊಳ್ಳದೆ, ಬೋಧಕರು, ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರನ್ನೊಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆ ಅನುಸರಿಸುವಂತೆ ಸರ್ಕಾರಕ್ಕೆ ಆಗ್ರಹಿಸುತ್ತದೆ.

error: Content is protected !!