ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡುವ ಸಚಿವರು, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತ ನಾಡುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಇಂಧನ ಇಲಾ ಖೆಯ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು.