ಮಾರ್ಚ್ 8ರಂದು ರಂದು ಜರುಗಲಿ ರುವ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಪೂರ್ವಭಾವಿ ಸಭೆಯನ್ನು ಜಿಲ್ಲಾ ವಕೀಲರ ಸಭಾಭವನದಲ್ಲಿ ಇಂದು ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಅವರು, ರಾಷ್ಟ್ರೀಯ ಲೋಕ ದಾಲತ್‌ನಲ್ಲಿ ವಕೀಲರ ಮತ್ತು ಸಾರ್ವ ಜನಿಕರ ಪಾತ್ರದ ಬಗ್ಗೆ ಮಾತನಾಡಲಿದ್ದಾರೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹಾಗೂ ಇತರೆ ನ್ಯಾಯಾಧೀಶರು ಭಾಗವಹಿಸಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್ ಎಲ್.ಎಚ್. ಮತ್ತು ಇತರರು ಉಪಸ್ಥಿತರಿರುವರು.