ಹೊನ್ನಾಳಿ, ಫೆ.18- ಇಲ್ಲಿನ ವಡ್ಡಿನಕೆರೆ ಹಳ್ಳದಿಂದ ಟಿ.ಬಿ ವೃತ್ತದ ಕಡೆಗೆ ಹೋಗುವ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿನ ಮಟ್ಕಾ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತಾಲ್ಲೂಕಿನ ಸುನೀಲ್ ಮತ್ತು ಚನ್ನಪ್ಪ ಬಂಧಿತ ಆರೋಪಿಗಳಾಗಿದ್ದು, ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ 89,250 ನಗದು ಮತ್ತು 12 ಮಟ್ಕಾ ಚೀಟಿ ವಶಕ್ಕೆ ಪಡೆಯಲಾಗಿದೆ. ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.