ವನಿತಾ ಸಮಾಜದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪಿ.ಜೆ. ಬಡಾವಣೆಯ ವನಿತಾ ಸಮಾಜದಲ್ಲಿ ಇಂದಿನಿಂದ ಇದೇ ದಿನಾಂಕ 22ರ ವರೆಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಇಂದು ಸಂಜೆ 4.30ಕ್ಕೆ ಪುರಂದರ ದಾಸರ ಪದಗಳ ಸ್ಪರ್ಧೆ ನಡೆಯಲಿದೆ.ನಾಳೆ ಶುಕ್ರವಾರ ಬೆಳಗ್ಗೆ 11ಕ್ಕೆ ಯೋಗಾಸನ ಸ್ಪರ್ಧೆ ನಡೆಯಲಿದೆ ಮತ್ತು ದಿನಾಂಕ 22ರ ಶನಿವಾರ ಮಧ್ಯಾಹ್ನ 2.30ಕ್ಕೆ ರಸ ಪ್ರಶ್ನೆ ಸ್ಪರ್ಧೆ ನಡೆಯಲಿದೆ.
25 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ ಎಂದು ಪದ್ಮ ಪ್ರಕಾಶ್ ತಿಳಿಸಿದ್ದಾರೆ. ಮಾಹಿತಿಗಾಗಿ 9449811407 ಸಂಪರ್ಕಿಸಿ.