ಬೆಳ್ಳೂಡಿ : ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪುನಶ್ಚೇತನ ಶಿಬಿರ

ದಾವಣಗೆರೆ, ಫೆ.21- ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಚಂದ್ರಗುಪ್ತ ಮೌರ್ಯ ಪಬ್ಲಿಕ್ ಸ್ಕೂಲ್‌ನಲ್ಲಿ ನಾಳೆ ದಿನಾಂಕ 22ರ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪುನಶ್ಚೇತನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಿಕ್ಷಣ ಸಮಿತಿಯ ಟ್ರಸ್ಟಿ ಮಾಗೋದಿ ಮಂಜುನಾಥ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಿಕ್ಷಣ ಸಮಿತಿ, ಚಂದ್ರಗುಪ್ತ ಮೌರ್ಯ ವಿದ್ಯಾ ಸಂಸ್ಥೆಗಳ ಸಂಯುಕ್ತಾಶ್ರಯ ಮತ್ತು ಹರಿಹರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ನಂದಿಗಾವಿ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಲಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಎಸ್‌.ಕೆ.ಬಿ ಪ್ರಸಾದ್, ಸ್ಪರ್ಧಾತ್ಮ ಪರೀಕ್ಷೆಗಳ ತಜ್ಞ ಎಂ. ಶಿವಕುಮಾರ್, ಕೌಶಲ್ಯ ಅಭಿವೃದ್ಧಿ ತರಬೇತುದಾರರಾದ ರೇಣುಕಾ ಅಶೋಕ್, ಶಿಕ್ಷಣ ತಜ್ಞರಾದ ನಿಂಗಪ್ಪ ಉಪ್ಪಾಳ್, ರಾಯ್ ಎಲ್. ಅರಸಿದ್ಧಿ, ಬಿ.ಸಿ. ತುಂಬಗಿ, ಶಶಿಕುಮಾರ್, ಕೆ.ವಿ. ವೆಂಕಟೇಶ್ ಬಾಬು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಿಕ್ಷಣ ಸಮಿತಿಯ ಟ್ರಸ್ಟಿ ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಉಪಯುಕ್ತ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಲೆಯ ಕಾರ್ಯದರ್ಶಿ ಎಸ್. ನಿಂಗಪ್ಪ, ಶೈಕ್ಷಣಿಕ ನಿರ್ದೇಶಕರಾದ ಶೃತಿ ಇನಾಮ್ದಾರ್ ಇದ್ದರು.

error: Content is protected !!