ದಾವಣಗೆರೆ, ಫೆ.21- ದೇಶದ ಒಳಿತಿಗಾಗಿ ಈಗಿನ ಪ್ರಧಾನಿ ಬದಲಾಗಬೇಕು. ಕೇಂದ್ರ ಸರ್ಕಾರಕ್ಕೆ ಇನ್ನುಳಿದ ನಾಲ್ಕು ವರ್ಷಗಳ ಅಧಿಕಾರವಧಿಯಲ್ಲಿ ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಜಪ ದೇಶದಿಂದ ತೊಲಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಹಾಗಾಗಿ ಅದು ಅಧಿಕಾರದಲ್ಲೇ ಇರಬಾರದು. ಆದರೆ ದೇಶದ ಜನಾಭಿಪ್ರಾಯ ಬಿಜೆಪಿಗೆ ಸಿಕ್ಕಿದೆ ಎಂದರು.
ದೇಶವನ್ನು ಒಬ್ಬರೇ ನಡೆಸಲು ಸಾಧ್ಯವಿಲ್ಲ. ಕೇಂದ್ರದ ಐವರು ಸಚಿವರ ಹೆಸರು ಜನರಿಗೆ ಗೊತ್ತಿಲ್ಲ. ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೀರೋ ಮಾಡಿವೆ. ದೀಪಾವಳಿಯಲ್ಲಿ ಸಿಡಿಸುವ ಪಟಾಕಿ ಕೂಡ ಚೀನಾದಿಂದ ಬರುತ್ತಿದೆ. ಹಾಗಾದರೆ ಮೇಕ್ ಇನ್ ಇಂಡಿಯಾ ಏನಾಯಿತು ? ಎಂದು ಪ್ರಶ್ನಿಸಿದರು.
ಕುಂಭಮೇಳದಲ್ಲಿ ನೀರು ಕಲುಷಿತ ಕಲುಷಿತಗೊಂಡಿರುವುದನ್ನು ವರದಿಗಳು ಖಚಿತಪಡಿಸಿವೆ. ಭಕ್ತರಿಗೆ ಕಲ್ಪಿಸಿದ ವ್ಯವಸ್ಥೆಯಲ್ಲಿ ತಾರತಮ್ಯ ಮಾಡಲಾಗಿದೆ. ಶ್ರೀಮಂತರಿಗಾಗಿ ಲಕ್ಷಾಂತರ ರೂಪಾಯಿಗಳ ಟೆಂಟ್‌ಗಳಿ ದ್ದರೆ, ಬಡವರು ಪುಣ್ಯ ಸ್ನಾನಕ್ಕೆ ಹಲವು ದಿನ ಕಾಯಬೇಕಿದೆ ದೂರಿದರು.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ಇದು ನ್ಯಾಯಕ್ಕೆ ಸಂದ ಜಯ. ದೇಶದ ಏಕೈಕ ಹಿಂದುಳಿದ ಸಮು ದಾಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ತೊಂದರೆ ನೀಡಬೇಕು ಎಂಬ ಬಿಜೆಪಿ ಹುನ್ನಾರ ವಿಫಲವಾಯಿತು ಎಂದರು.