ಹರಪನಹಳ್ಳಿ, ಫೆ. 24 – ಕಟ್ಟಡ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಂಡು ಆರೋಗ್ಯವಾಗಿರಿ ಎಂದು ಪುರಸಭೆ ಸದಸ್ಯ ಜಾಕೀರ್ ಸರ್ಖಾವಾಸ್ ಹೇಳಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಪಟ್ಟಣದ ಮೇನ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ನೋಂದಾ ಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಟ್ಟಡ ಕಾರ್ಮಿಕರು ದಿನ ನಿತ್ಯ ದುಡಿಮೆ ಮಾಡಿ ಜೀವನ ಸಾಗಿಸುತ್ತಾ ಆಸ್ಪತ್ರೆಗೆ ಹೋಗಲು ನಿರ್ಲಕ್ಷ್ಯ ವಹಿಸುತ್ತಾರೆ. ಯಾವುದೇ ತಪಾಸಣೆ ಮಾಡಿಕೊಳ್ಳುವು ದಿಲ್ಲ. ಆದ್ದರಿಂದ ಪ್ರತಿಯೊಬ್ಬರು ಆರೋಗ್ಯವಾಗಿ ಇರಬೇಕು ಎಂಬ ಉದ್ದೇಶದಿಂದ ಕರ್ನಾಟಕ ಸರ್ಕಾರ ತಮ್ಮ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ದ್ದಾರೆ. ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕು.ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾ ತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.