ಕೆಟಿಜೆ ನಗರ 2ನೇ ಮುಖ್ಯ ರಸ್ತೆ 14ನೇ ತಿರುವಿನಲ್ಲಿರುವ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾಶಿವರಾತ್ರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 6.30ಕ್ಕೆ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ನಾಳೆ ದಿನಾಂಕ 27ರ ಗುರುವಾರ ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ಸಮಾಜ ಬಾಂಧವರು ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರೀ ಕುರುಹಿನಶೆಟ್ಟಿ ನೇಕಾರ ಸಮಾಜದ ಸಂಘದ ಪದಾಧಿಕಾರಿಗಳು ಕೋರಿದ್ದಾರೆ.