ಎಲೆಬೇತೂರಿನಲ್ಲಿ ಇಂದು ಶಿವರಾತ್ರಿ

ದಾವಣಗೆರೆ ತಾಲ್ಲೂಕು ಎಲೆಬೇತೂರು ಗ್ರಾಮದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಈಶ್ವರ ಮತ್ತು ಶ್ರೀ ಬಸವೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯ ಲಿದೆ. ಶ್ರೀ ಸವಗದ್ದಿಗೆ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಗೆ ಸಂಜೆ 6 ಗಂಟೆಗೆ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂ ಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಶ್ರೀ ನಂದಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ನಂದಿ ಬಸವೇಶ್ವರ ಸ್ವಾಮಿಗೆ ರಾತ್ರಿ 8.30ಕ್ಕೆ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.

error: Content is protected !!