ಮಾ. 1ರಂದು ಬಿಜೆಪಿ ವೀರಶೈವ-ಲಿಂಗಾಯತ ಮುಖಂಡರ ಸಭೆ

ದಾವಣಗೆರೆ, ಫೆ. 26- ಕರ್ನಾಟಕದಲ್ಲಿ ಬಿಜೆಪಿಯನ್ನು ಸದೃಢವಾಗಿ ಬೆಳೆಸುವ ಹಿನ್ನೆಲೆಯಲ್ಲಿ ಮಾರ್ಚ್ 1 ರಂದು ಬೆಳಿಗ್ಗೆ 11.30 ಕ್ಕೆ ನಗರದ  ಸಮೃದ್ಧಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ಸಭೆ ನಡೆಸಲಾಗುವುದು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡ ಲೋಕಿಕೆರೆ ನಾಗರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಒಳ ಪಂಗಡಗಳ ಪ್ರಮುಖರ ಸಭೆ ನಡೆಯಲಿದ್ದು, ಸಭೆಯನ್ನು ನಡೆಸುವ ಸ್ಥಳದ ಬಗ್ಗೆ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಸಭೆಗೆ ಮೂರು ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಾಜಿ ಹಾಗೂ ಹಾಲಿ ಶಾಸಕರು, ಸಂಸದರು ಆಗಮಿಸಲಿದ್ದಾರೆ ಎಂದರು.

ಇಡೀ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನನಾಯಕ ಎಂದರೆ ಬಿ.ಎಸ್.ಯಡಿಯೂರಪ್ಪ ಮಾತ್ರ. ಯಾವುದೇ ಒಳ ಪಂಗಡಗಳ ಬೇಧವಿಲ್ಲದೆ, ಅವರನ್ನು ಸಾಮೂ ಹಿಕ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಹ ರಾಜ್ಯದ ಜನತೆ ಮಾಸ್ ಲೀಡರ್ ಎಂದು ಒಪ್ಪಿಕೊಂಡು ಅವರ ಬೆಂಬಲಕ್ಕೆ ನಿಂತಿದ್ದಾರೆಂದು ಹೇಳಿದರು. 2021 ರಲ್ಲಿ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಕ್ಷದ ಬಹುತೇಕ ಮುಖಂಡರು, ಕಾರ್ಯಕರ್ತರಿಗೆ ಬೇಸರ ಉಂಟಾಗಿ ಪಕ್ಷದಿಂದ ದೂರ ಸರಿದಿದ್ದಾರೆ. ಕಾರಣ ಈ ಎಲ್ಲಾ ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿ ಮತ್ತೆ ಬಿಜೆಪಿಗೆ ಬಲ ತುಂಬುವ ನಿಟ್ಟಿನಲ್ಲಿ ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಧನಂಜಯ ಕಡ್ಲೇಬಾಳು, ಚಂದ್ರಶೇಖರ ಪೂಜಾರ್, ರಾಜು ವೀರಣ್ಣ, ಜಯಣ್ಣ, ಬಾತಿ ಶಿವಕುಮಾರ್, ತೋಟಪ್ಪ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!