ದಾವಣಗೆರೆ, ಫೆ. 26- ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಪ್ರವೇಶದೊಂದಿಗೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಸಾಧು ಲಿಂಗಾಯತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಲ್ಪಿಸಲು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರತಿಷ್ಠಾನದ ಸದಸ್ಯ ಡಾ.ಹೆಚ್.ವಿ. ವಾಮದೇವಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ಪ್ರತಿ ವರ್ಷ ಸಹ ಪ್ರಥಮ, ದ್ವಿತೀಯ, ತೃತೀಯ ಮತ್ತು ನಾಲ್ಕನೇ ವರ್ಷದಲ್ಲಿ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ 34 ವಿದ್ಯಾರ್ಥಿಗಳಿಗೆ ತಲಾ 20 ಸಾವಿರ ರೂ. ಆರ್ಥಿಕ ನೆರವು ನೀಡಲಾಗುವುದು ಎಂದರು.
ಸಾಧು ಲಿಂಗಾಯತ ಸಮಾಜಕ್ಕೆ ಸೇರಿದ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಮಾತ್ರ ಆರ್ಥಿಕ ನೆರವು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ವೆಬ್‌ಸೈಟ್‌ನಲ್ಲಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ಮಾರ್ಚ್ 15 ರೊಳಗಾಗಿ ಅರ್ಜಿ ಸಲ್ಲಿಬೇಕು. ವಿವರಕ್ಕೆ ಸಂಪರ್ಕಿಸುವ ಮೊಬೈಲ್ ಸಂಖ್ಯೆ : 9481182700, 9242443909.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕಷ ಎಂ.ಬಿ. ಸಂಗಮೇಶ್ವರಗೌಡ್ರು, ಸದಸ್ಯರಾದ ಡಾ. ಧನ್ಯ ಕುಮಾರ್, ಎಸ್.ಆರ್. ಶಿರುಗಂಬಿ, ಕುಸುಮಾ, ಲೋಹಿತ್ ಉಪಸ್ಥಿತರಿದ್ದರು.