ಹಾಲಕೆರೆ ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಇವರ ವತಿಯಿಂದ ಇಂದು ಸಂಜೆ 6.30 ಕ್ಕೆ ಶ್ರೀ ಅನ್ನದಾನೇಶ್ವರ ಶಾಖಾ ಮಠದಲ್ಲಿ 278 ನೇ ಶಿವಾನುಭವ ಸಂಪದ ಕಾರ್ಯಕ್ರಮ ನಡೆಯಲಿದೆ.
ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅನ್ನದಾನೀಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಅಥಣಿ ಎಸ್. ವೀರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತ ಸೇವಾದಳ ಜಿಲ್ಲಾ ಸಂಘಟಕ ಫಕ್ಕೀರಗೋಡ ಹಳೆಮನಿ ಉಪನ್ಯಾಸ ನೀಡಲಿದ್ದಾರೆ.