ಬೀದಿ ನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಫೆ.28- ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಕಲಾ ಪ್ರಕಾರದಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಲಾ ಪ್ರದರ್ಶನ ನೀಡಲು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಮಾರ್ಚ್ 7 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ವಿವರಕ್ಕೆ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಕಚೇರಿ ಸಂಪರ್ಕಿಸಬಹುದು.

error: Content is protected !!