ನಗರದಲ್ಲಿ ಇಂದು ಬಿಜೆಪಿ ವೀರಶೈವ ಲಿಂಗಾಯತ ಮುಖಂಡರ ಸಭೆ

ಕರ್ನಾಟಕದಲ್ಲಿ ಬಿಜೆಪಿಯನ್ನು ಸದೃಢವಾಗಿ ಬೆಳೆಸುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11.30 ಕ್ಕೆ ಸಮೃದ್ಧಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ಸಭೆ ನಡೆಸಲಾಗುವುದು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡ ಲೋಕಿಕೆರೆ ನಾಗರಾಜ್ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಒಳ ಪಂಗಡಗಳ ಪ್ರಮುಖರ ಸಭೆ ನಡೆಯಲಿದ್ದು, ಸಭೆಯನ್ನು ನಡೆಸುವ ಸ್ಥಳದ ಬಗ್ಗೆ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಸಭೆಗೆ ಮೂರು ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಾಜಿ ಹಾಗೂ ಹಾಲಿ ಶಾಸಕರು, ಸಂಸದರು ಆಗಮಿಸಲಿದ್ದಾರೆ.

error: Content is protected !!