ಶ್ರೀ ಅಂಬಾಭವಾನಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ತನ್ನ ಸ್ವಂತ ಕಟ್ಟಡ ಹೊಂದುವ ನಿಟ್ಟಿನಲ್ಲಿ ಡಿ. ದೇವರಾಜ ಅರಸು ಬಡಾವಣೆ ಬಿ ಬ್ಲಾಕ್‌ನಲ್ಲಿರುವ ಪೊಲೀಸ್ ಭವನದ ಎದುರು ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.
ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ಮತ್ತು ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲರಾವ್ ಮಾನೆ ಅವರ ಅಧ್ಯಕ್ಷತೆ ಹಾಗೂ ಉಪಾಧ್ಯಕ್ಷ ಗಿರಿಧರ್ ಡಿ. ಮೆಹರ್ವಾಡೆ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ಶಂಕುಸ್ಥಾಪನೆಯ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಮರಾಠ ಸಮಾಜದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್, ಮಾರಾಠ ಸಮಾಜದ ಅಧ್ಯಕ್ಷ ಮಾಲತೇಶರಾವ್ ಜಾಧವ್, ಎಸ್.ಎಸ್.ಕೆ. ಸಮಾಜದ ಅಧ್ಯಕ್ಷ ಮಲ್ಲರಸಾ ಆರ್. ಕಾಟ್ವೆ, ಹಿರಿಯ ಲೆಕ್ಕಪರಿಶೋಧಕ ಎ. ಕಿರಣ್ ಕುಮಾರ್, ಸ್ವಕುಳಸಾಳಿ ಸಮಾಜದ ಅಧ್ಯಕ್ಷ ಜಿ.ಪಿ. ಮೋಹನ್, ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಎಂ.ಎಸ್. ವಿಠಲ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.