ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಂಜನೇಯ ಬಡಾವಣೆ 15ನೇ ತಿರುವಿನಲ್ಲಿರುವ ಗೀತಾ ಪಾಠ ಶಾಲೆಯ ರಜತ ಮಹೋತ್ಸವ ಮತ್ತು ಶಿವರಾತ್ರಿ ಕಾರ್ಯಕ್ರಮವು ಇಂದು ಬೆಳಿಗ್ಗೆ 11 ಗಂಟೆಗೆ ಶಾಖಾ ಆವರಣದಲ್ಲಿ ನಡೆಯಲಿದೆ.
ಸಂಸ್ಥೆಯ ಪ್ರಧಾನ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿರುವ ಈ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಅವರುಗಳು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಈಶ್ವರೀಯ ವಿಶ್ವವಿದ್ಯಾಲಯದ ಹಳಿಯಾಳ ಶಾಖೆ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಪದ್ಮಾಜಿ, ನಗರ ಪಾಲಿಕೆ ಮಾಜಿ ಸದಸ್ಯರಾದ ಶ್ರೀಮತಿ ವೀಣಾ, ಶಿವ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮಾಗನೂರು ಸಂಗಮೇಶ್ವರ ಗೌಡ್ರು, ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ, ಮಹಾರಾಜ ಸೋಪ್ಸ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿರ್ದೇಶಕ ಎಂ.ಇ. ರವಿರಾಜ್, ಲಲಿತಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾದ ಶ್ರೀಮತಿ ಇ.ಆರ್. ಶಶಿಕಲಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.