ನಗರದಲ್ಲಿ ಇಂದು ಚಿತ್ರಕಲಾ ಶಿಬಿರದ ಉದ್ಘಾಟನೆ

ವೃತ್ತಿ ರಂಗಭೂಮಿ ರಂಗಾಯಣ (ದಾವಣಗೆರೆ) ಇವರ ವತಿಯಿಂದ ರಾಷ್ಟ್ರೀಯ ವೃತ್ತಿ ರಂಗೋತ್ಸವ-2025 ರ ಅಂಗವಾಗಿ ಲಾಂಛನ ಬಿಡುಗಡೆ ಮತ್ತು ಚಿತ್ರಕಲಾ ಶಿಬಿರದ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ 10.30 ಕ್ಕೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಕಾರ್ಯಕ್ರಮ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾ ಲಯದ ಪ್ರಾಚಾರ್ಯ ಡಾ. ಜಯರಾಜ್ ಎಂ. ಚಿಕ್ಕಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯ ಡಾ. ಎನ್.ಸಿ. ಪ್ರಶಾಂತ್, ಶಿಬಿರದ ಸಂಚಾಲಕ ಶಿವಶಂಕರ ಸುತಾರ, ಉಪನ್ಯಾಸಕ ದತ್ತಾತ್ರೇಯ ಎನ್.ಭಟ್, ವೃತ್ತಿ ರಂಗಭೂಮಿ ರಂಗಾಯಣದ ವಿಶೇಷಾಧಿಕಾರಿ ರವಿಚಂದ್ರ ಭಾಗವಹಿಸಲಿದ್ದಾರೆ. 

error: Content is protected !!