ಜಿಲ್ಲಾಡಳಿತದಿಂದ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರಂಭವು ಇಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್, ದಿನೇಶ್ ಕೆ. ಶೆಟ್ಟಿ, ಜಿ.ಎಂ. ಗಂಗಾಧರಸ್ವಾಮಿ, ಸುರೇಶ್ ಬಿ. ಇಟ್ನಾಳ್, ರೇಣುಕಾ, ವೀರೇಶ್ ಎಸ್, ಓಡೇನಪುರ, ಜಿ. ಕೊಟ್ರೇಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.