ದಾವಣಗೆರೆ, ಮಾ. 6- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಬಾರಿ ರಾಜ್ಯದ ಕಲ್ಯಾಣಕ್ಕಾಗಿ ಜನತಾ ಬಜೆಟ್ ಮಂಡಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಎ.ಆರ್. ತಾಹೀರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಕಳೆದ ವಾರ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜನಾಗ್ರಹ ಸಭೆ ಮೂಲಕ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಸರ್ಕಾರಕ್ಕೆ ಆಗ್ರಹಿಸಲಾಗಿತ್ತು. ಸಚಿವ ಜಮೀರ್ ಅಹ್ಮದ್ ಖಾನ್ ಮನವಿ ಸ್ವೀಕರಿಸಿ, ಬೇಡಿಕೆಗಳ ಈಡೇರಿಕೆ ಬಗ್ಗೆ ಭರವಸೆ ನೀಡಿದ್ದರು ಎಂದರು.
ಇಲ್ಲಿನ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಲು ಈ ಬಾರಿ ಬಜೆಟ್‌ನಲ್ಲಿ ವಿಶೇಷ ಅನುದಾನ ತರುವಂತೆ ಸಚಿವರು, ಶಾಸಕರಿಗೆ ಒತ್ತಾಯಿಸಿದರು.
ರಜ್ವಿ ಅಹ್ಮದ್, ಮಹಮ್ಮದ್ ಅಜರುದ್ದೀನ್, ಸಮೀವುಲ್ಲಾ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.