ದಾವಣಗೆರೆ, ಮಾ. 7- ಫೆಬ್ರವರಿ ಮತ್ತು ಮಾರ್ಚ್-2025ರ ಮಾಹೆಗೆ ರಾಜ್ಯದ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 5 ಕೆ.ಜಿ ಓ.ಎಂ.ಎಸ್.ಎಸ್.ಡಿ ಅಕ್ಕಿ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಗಳಿಂದ ಬಯೋಮೆಟ್ರಿಕ್ ನೀಡಿ ಪಡೆಯ ಬೇಕು.
ಒಂದು ವೇಳೆ ನ್ಯಾಯಬೆಲೆ ಅಂಗಡಿ ಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಟೋಲ್‍ಫ್ರೀ ಸಂಖ್ಯೆ 1967 ಅಥವಾ ಸಂಬಂಧಿಸಿದ ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.