ದಾಖಲೆಯ 16ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಗೆ ಪ್ರಸಕ್ತ ಬಜೆಟ್‌ನಲ್ಲಿ 51 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ರಾಜ್ಯ ಬಜೆಟ್ ಕೇಂದ್ರೀಕರಿಸಿದೆ ಎಂದು ಸಾಮಾಜಿಕ ಸೇವಾ ಕಾರ್ಯಕರ್ತ ಶ್ರೀಕಾಂತ್ ಬಗೇರ ಪ್ರತಿಕ್ರಿಯಿಸಿದ್ದಾರೆ.