ಆರ್.ಎಲ್ ಕಾನೂನು ಕಾಲೇಜಿನಲ್ಲಿ ಇಂದು ಬೆಳಿಗ್ಗೆ 10ಕ್ಕೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಚಾರ್ಯ ಡಾ. ಜಿ.ಎಸ್. ಯತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣಕುಮಾರ್, ಜೆ.ಜೆ.ಎಂ. ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆರಾದ ಡಾ. ಶುಕ್ಲಾಶೆಟ್ಟಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಅನುರಾಧ ಬಕ್ಕಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.