5, 8ನೇ ತರಗತಿಗೆ ಪ್ರವೇಶ ಪರೀಕ್ಷೆ

ದಾವಣಗೆರೆ, ಮಾ.11- ಬೆಂಗಳೂರಿನ ಚೆನ್ನನಹಳ್ಳಿಯ ಜನಸೇವಾ ವಿದ್ಯಾಕೇಂದ್ರ ಶಾಲೆಯಲ್ಲಿ ಪ್ರಸಕ್ತ ಸಾಲಿನ 5 ಮತ್ತು 8ನೇ ತರಗತಿಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರವೇಶಕ್ಕೆ ಏಪ್ರಿಲ್ 6ರಂದು ಪರೀಕ್ಷೆ ನಡೆಸಲಾಗುವುದು.

ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದಾವಣಗೆರೆ, ಚನ್ನಗಿರಿ, ಜಗಳೂರು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹರಿಹರ, ಹೊನ್ನಾಳಿ, ಕಚೇರಿಗಳನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

error: Content is protected !!