ದಾವಣಗೆರೆ ಜಿಲ್ಲಾ ನೂತನ ನ್ಯಾಯಾಧೀಶರಾಗಿ ವೇಲಾ ಖೋಡೆ

ಬೆಂಗಳೂರು, ಮಾ. 11-  ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ಶ್ರೀಮತಿ ವೇಲಾ ದಾಮೋದರ್ ಖೋಡೆ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ.

ವೇಲಾ ಅವರು ಈವರೆಗೂ ಬೆಂಗಳೂರಿನಲ್ಲಿ ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ರಿಜಿಸ್ಟ್ರಾರ್ (ವಿಚಾರಣೆಗಳು) ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಈವರೆಗೂ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಅವರನ್ನು ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ.

error: Content is protected !!