ದಾವಣಗೆರೆ, ಡಿ.19- ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಡಾ. ಕವಿತಾ ಮಿಶ್ರಾ ಸೇರಿದಂತೆ, ಗಣ್ಯರು ಪಾಲ್ಗೊಳ್ಳಲಿದ್ದಾರೆ.
ದೃಶ್ಯ ಕಲಾ ಮಹಾವಿದ್ಯಾಲಯದ ವಜ್ರ ಮಹೋತ್ಸವದ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ದೃಶ್ಯ ಕಲೆಯ ಬಹುಮುಖಿ ಆಯಾಮಗಳು’ ವಿಷಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಇಂದು ಬೆಳಿಗ್ಗೆ 10.30ಕ್ಕೆ ದೃಶ್ಯಕಲಾ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಇಂದು ಬೆಳಿಗ್ಗೆ 10.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಖ್ಯಾತ ವಿಮರ್ಶಕ ಕೆ.ವಿ. ಸುಬ್ರಹ್ಮಣ್ಯಂ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಪುರಸ್ಕೃತ ಗಾಯತ್ರಿ ದೇಸಾಯಿ ಮತ್ತು ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಹಿರಿಯ ಕಾರ್ಯಕ್ರಮ ಅಧಿಕಾರಿ ಟಿ.ಎನ್. ಕೃಷ್ಣ ಮೂರ್ತಿ ಭಾಗವಹಿಸಲಿದ್ದಾರೆ. ದಾವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ.ಸಿ.ಕೆ. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ. ಜಯರಾಜ್ ಚಿಕ್ಕ ಪಾಟೀಲ ಉಪಸ್ಥಿತರಿರುವರು.
ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದಾವಿವಿ ಕುಲಸಚಿವ (ಆಡಳಿತ) ಪ್ರೊ. ಆರ್. ಶಶಿಧರ್ ಅಧ್ಯಕ್ಷತೆ ವಹಿಸಲಿದ್ದು, ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯರಾಜ್ ಎಂ. ಚಿಕ್ಕಪಾಟೀಲ, ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸತೀಶ್ ಕುಮಾರ್, ಬೋಧನಾ ಸಹಾಯಕ ದತ್ತಾತ್ರೇಯ ಎನ್. ಭಟ್ ಉಪಸ್ಥಿತರಿರುವರು.