ನೂತನ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10.30 ಕ್ಕೆ ನಡೆಯಲಿದೆ.
ನೂತನ ವಿದ್ಯಾಸಂಸ್ಥೆ ಅಧ್ಯಕ್ಷ ಎನ್. ಪರಶುರಾಮನಗೌಡ ಅಧ್ಯಕ್ಷತೆ ವಹಿಸುವರು. ಸಹ ಪ್ರಾಧ್ಯಾಪಕ ಡಾ.ಕೆ.ಎಂ. ಈಶ್ವರಪ್ಪ ವಿದ್ಯಾರ್ಥಿ ಸಂಘ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯ ದ್ಯಾಮಪ್ಪ, ಪ್ರಾಚಾರ್ಯ ಡಾ. ಕೆ.ಎಸ್. ದಿವಾಕರನಾಯ್ಕ ಆಗಮಿಸಲಿದ್ದಾರೆ.