ಆರ್.ಎಲ್ ಕಾನೂನು ಕಾಲೇಜು ರೆಫರೆನ್ಸ್ ಹಾಲ್ನಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನ ಕಾರ್ಯಕ್ರಮವು ಇಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಕೆ.ಎನ್. ಪ್ರದೀಪ್ ವಹಿಸಲಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಡಿ.ಕೆ. ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಆಗಮಿಸಲಿದ್ದಾರೆ.
March 29, 2025