ಮಲೇಬೆನ್ನೂರು, ಮಾ.20- ನಾಳೆ ಶುಕ್ರವಾರದಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡವನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಿದ್ದು, 7 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
11 ಕೊಠಡಿಗಳಿಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಕುಳಿತುಕೊಂಡು ಪರೀಕ್ಷೆ ಬರೆಯಲು ಸಿದ್ಧತೆ ಮಾಡಲಾಗಿದೆ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಜಗದೀಶ್ ಉಜ್ಜಯ್ಯನವರ್, ಪ್ರಶ್ನೆಪತ್ರಿಕೆ ಅಭಿರಕ್ಷಕ ಸಿ.ಜಯ್ಯಣ್ಣ ತಿಳಿಸಿದ್ದಾರೆ.
ಈ ಪರೀಕ್ಷಾ ಕೇಂದ್ರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ, ಸರ್ಕಾರಿ ಉರ್ದು ಪ್ರೌಢಶಾಲೆ, ಬೀರಲಿಂಗೇಶ್ವರ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆಗಳು, ಜಾಮೀಯಾ ನ್ಯಾಷನಲ್ ಉರ್ದು ಪ್ರೌಢಶಾಲೆ, ರಂಗನಾಥ ಪ್ರೌಢಶಾಲೆ ಹಾಗೂ ಮಾಲತೇಶ್ ಪಬ್ಲಿಕ್ ಶಾಲೆಯ 260 ವಿದ್ಯಾರ್ಥಿಗಳು ಶುಕ್ರವಾರ ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ.
ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡವನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಿದ್ದು, ಕುಂಬಳೂರಿನ ಸರ್ಕಾರಿ ಪ್ರೌಢಶಾಲೆ, ಶರಣ ಸಂಗಮ ಪ್ರೌಢಶಾಲೆ, ನಂದಿತಾವರೆಯ ಬಸವೇಶ್ವರ ಪ್ರೌಢಶಾಲೆ, ಹಾಲಿವಾಣದ ಸರ್ಕಾರಿ ಪ್ರೌಢಶಾಲೆ ಮತ್ತು ಬಸಾಪುರದ ರಾಜರಾಜೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ದೇವರಬೆಳಕೆರೆ ಗ್ರಾಮದ ಮೈಲಾರ ಲಿಂಗೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೈಲಾರ ಲಿಂಗೇಶ್ವರ ಪ್ರೌಢಶಾಲೆ ಮೊರಾರ್ಜಿ ಪ್ರೌಢಶಾಲೆ, ನಿಟ್ಟೂರಿನ ಸರ್ಕಾರಿ ಪ್ರೌಢಶಾಲೆ, ಕುಣೆಬೆಳಕೆರೆಯ ಬಾಪೂಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ನಂದಿಗುಡಿ ನಂದೀಶ್ವರ ಪ್ರೌಢಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಿದ್ದು, ನಂದೀಶ್ವರ ಪ್ರೌಢಶಾಲೆ, ಉಕ್ಕಡಗಾತ್ರಿಯ ಕರಿಬಸವೇಶ್ವರ ಪ್ರೌಢಶಾಲೆ, ಕೊಕ್ಕನೂರಿನ ಸರ್ಕಾರಿ ಪ್ರೌಢಶಾಲೆ, ಕೆ.ಎನ್.ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಹೊಳೆಸಿರಿಗೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದ್ದು, ಇಲ್ಲಿ ಸರ್ಕಾರಿ ಪ್ರೌಢಶಾಲೆ, ಮಾಗೋಡ ಹಾಲಪ್ಪ ಪ್ರೌಢಶಾಲೆ, ಹೊಸಳ್ಳಿ ವೇಮನಗುರುಪೀಠದ ಪ್ರೌಢಶಾಲೆ ಮತ್ತು ಧೂಳೆಹೊಳೆಯ ತೆಗ್ಗಿನಮಠದ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಮತ್ತು ಭಾನುವಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಭಾನುವಳ್ಳಿಯ ಸರ್ಕಾರಿ ಪ್ರೌಢಶಾಲೆ, ಶ್ರೀಮತಿ ಗೌರಮ್ಮ ಹಾಲಪ್ಪ ಪ್ರೌಢಶಾಲೆ, ಬೆಳ್ಳೂಡಿಯ ಚಂದ್ರಗುಪ್ತ ಮೌರ್ಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬೆಳ್ಳೂಡಿಯ ಪಟೇಲ್ ಗುರುಬಸಪ್ಪ ಪ್ರೌಢಶಾಲೆ ಯನ್ನೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.