ಹರಪನಹಳ್ಳಿ ತಾಲ್ಲೂಕಿನ ಹಗರಿ ಗಜಾಪುರದಲ್ಲಿ ಕುರಮನಹಳ್ಳಿ ಪಾಟೀಲ್ ಮಾಧುರಿ ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಸಂಘ ಇವರ ವತಿಯಿಂದ ಶ್ರೀ ತೆಗ್ಗಿನ ಮಠ ಮಹಾಸಂಸ್ಥಾನದ ತ್ರಿಕಾಲ ವಂದನೀಯ ಲಿಂಗೈಕ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ಪುರಾಣ ಪ್ರವಚನ ಕಾರ್ಯಕ್ರಮವನ್ನು ಇಂದಿನಿಂದ ಇದೇ ದಿನಾಂಕ 30ರವರೆಗೆ ಹಗರಿ ಗಜಾಪುರದ ವರಗಳ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ಜರುಗಲಿದೆ.
ಮಾನಿಹಳ್ಳಿಯ ಶ್ರೀ ಡಾ. ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಪ್ರವಚನ ಮಾಡಲಿದ್ದಾರೆ.
ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಕೊಟ್ಟೂರು ಕಟ್ಟಿಮನಿ ಹಿರೇಮಠದ ಶ್ರೀ ಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಬೆಣ್ಣಿಹಳ್ಳಿಯ ಹಿರೇಮಠದ ಶ್ರೀ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.