ಹೋರಿಯಿಂದ ಒದೆತಕ್ಕೆ ಒಳಗಾದ ವೃದ್ಧ ಸಾವು
ಹರಿಹರ, ಮಾ.21- ಊರಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಬೆಲ್ಲದ ಬಂಡಿ ಮೆರವಣಿಗೆಯಲ್ಲಿ ಹೋರಿಯೊಂದು ಬೆದರಿ ಚಿನ್ನಾಟವಾಡಿ ದ್ದರಿಂದ ರಾಮತೀರ್ಥ ಗ್ರಾಮದ ವೀರಾಚಾರಿ (72) ಎಂಬ ವೃದ್ಧ ಮೃತಪಟ್ಟಿದ್ದಾರೆ. ನಿನ್ನೆ ನಡೆದ ಮೆರವಣಿಗೆಯಲ್ಲಿ, ಹೋರಿ ವೀರಾಚಾರಿ ಅವರಿಗೆ ಒದ್ದಿದ್ದರಿಂದ ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸ ಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 12.45ಕ್ಕೆ ಅವರು ಕೊನೆಯುಸಿರೆಳೆದರು. ಹರಿಹರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.